Kannada NewsLatestWorld

*ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ.

ಕಳೆದ 6 ದಿನಗಳಿಂದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾನೆ. ಈ ಘಟನೆ ಅಮೆರಿಕದಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿ ಸಮುದಾಯದಲ್ಲಿ ತೀವ್ರ ಆತಂಕ ಮೂಡಿಸಿದೆ.

Home add -Advt

ಸಾಕೇತ್ ಕಣ್ಮರೆಯಾದ ನಂತರ, ಕ್ಯಾಲಿಫೋರ್ನಿಯಾ ಪೊಲೀಸರು ಲೇಕ್ ಅಂಜಾ, ಬರ್ಕ್ಲಿ ಹಿಲ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಟಿಲ್ಡೆನ್ ಪ್ರಾದೇಶಿಕ ಉದ್ಯಾನವನದ ಬಳಿಯ ಮನೆಯ ಬಳಿ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಹೊಂದಿದ್ದ ಬ್ಯಾಗ್ ಪತ್ತೆಯಾಗಿತ್ತು.

ಇದೀಗ ಸಾಕೇತ್ ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ದೂತಾವಾಸವು ದೃಢಪಡಿಸಿದೆ. ಮೃತದೇಹವನ್ನು ಭಾರತಕ್ಕೆ ತ್ವರಿತವಾಗಿ ತಲುಪಿಸಲು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಮತ್ತು ಈ ಕಷ್ಟದ ಸಮಯದಲ್ಲಿ ಕುಟುಂಬದೊಂದಿಗೆ ತನ್ನ ಸಂತಾಪವನ್ನು ವ್ಯಕ್ತಪಡಿಸುವುದಾಗಿ ದೂತಾವಾಸವು ಹೇಳಿಕೆ ನೀಡಿದೆ.

ಸಾಕೇತ್ ಶ್ರೀನಿವಾಸಯ್ಯ, ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9 ರಂದು ಕ್ಯಾಂಪಸ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಅವರು ಕೊನೆಯ ಬಾರಿಗೆ ಕಾಣಿಸಿಕೊಂಡವರು ಬಳಿಕ ನಾಪತ್ತೆಯಾಗಿದ್ದರು. ಈಗ ಶವವಾಗಿ ಪತ್ತೆಯಾಗಿದ್ದಾರೆ. ಇದು ಕೊಲೆಯೋ ಆತ್ಮಹತ್ಯೆಯೋ? ಆಕಸ್ಮಿಕ ಸಾವೋ? ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.


Related Articles

Back to top button