Kannada NewsKarnataka NewsLatest

*BREAKING: ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ಡಿವಿಎಸ್ ವಸತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ.

ಮೃತ ವಿದ್ಯಾರ್ಥಿಯನ್ನು ಚಿತ್ರದುರ್ಗದ ಕರಿಯಣ್ಣಹಳ್ಳಿಯ ಕೊಟ್ರೇಶ್ ಎಂದು ಗುರುತಿಸಲಾಗಿದೆ. ಡಿವಿಎಸ್ ವಸತಿ ಶಾಲೆಯಲ್ಲಿದು ಹತ್ತನೇ ತರಗತಿ ಓದುತ್ತಿದ್ದ.

ವಿದ್ಯಾರ್ಥಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button