Kannada NewsKarnataka NewsLatest

*BREAKING: ಧಾರವಾಡ ಹೈಕೋರ್ಟ್ ಪೀಠಕ್ಕೆ ಮತ್ತೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಧಾರವಾಡದ ಹೈಕೋರ್ಟ್ ಪೀಠಕ್ಕೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಧಾರವಾಡ ಹೈಕೋರ್ಟ್ ಪೀಠದ ಅಧಿಕೃತ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ವಕೀಲರು, ನ್ಯಾಯಾಧೀಶರು ಕೋರ್ಟ್ ಕಲಾಪ ಸ್ಥಗಿತಗೊಳಿಸಿ ನ್ಯಾಯಾಲಯದಿಂದ ಹೊರ ಬಂದಿದ್ದಾರೆ.

ಧಾರವಾಡ ಹೈಕೋರ್ಟ್ ಪೀಠಕ್ಕೆ ಗರಗ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.

ಇದೇ ವೇಳೆ ಮಡಿಕೇರಿ ಕೋರ್ಟ್ ಗೂ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಕಿಡಿಗೇಡಿಗಳು, ಕೋರ್ಟ್ ನಲ್ಲಿ ಬಾಂಬ್ ಇಡಾಲಾಗಿದ್ದು, ಮಧ್ಯಾಹ್ನದ ವೇಳೆಗೆ ಸ್ಫೋಟಗೊಳ್ಳಲಿದೆ ಎಂದು ಉಲ್ಲೇಖಿಸಿದ್ದಾರೆ.

ಮಡಿಕೇರಿ ನ್ಯಾಯಾಲಯದಲ್ಲಿಯೂ ಪೊಲೀಸರು, ಬಾಂಬ್ ಪತ್ತೆದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button