Kannada NewsKarnataka NewsPolitics

*ಪ್ರಧಾನಿ ಮೋದಿಯಿಂದ ಕರ್ನಾಟಕದಲ್ಲಿ ಮಿನಿ ಹೆಲಿಕಾಪ್ಟರ್ ಘಟಕಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ : ಕೋಲಾರ ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಟಾಟಾ ಅಡ್ವಾನ್ಸ್ ಸಿಸ್ಟಮ್ಸ್ ಲಿಮಿಟೆಡ್ ಮತ್ತು ಏರ್‌ಬಸ್ ಸಹಯೋಗದ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ಫೆಬ್ರವರಿ 17ರಂದು ಅಧಿಕೃತ ಚಾಲನೆ ದೊರೆಯಲಿದೆ. 

ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಹಾಗೂ ಪೊಲೀಸ್ ಅಧಿಕಾರಿಗಳು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಸುಮಾರು 16 ಎಕರೆ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಈ ಘಟಕ ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಅಂತಿಮ ಜೋಡಣಾ ಕೇಂದ್ರವೆಂದು ಪರಿಗಣಿಸಲಾಗಿದೆ. ಮೊದಲ ಹಂತದಲ್ಲಿ ವರ್ಷಕ್ಕೆ H125 ಮಾದರಿಯ 10 ಹೆಲಿಕಾಪ್ಟರ್‌ಗಳನ್ನು ತಯಾರಿಸುವ ಸಾಮರ್ಥ್ಯ ಇದಕ್ಕಿದೆ. ಈ ಹೆಲಿಕಾಪ್ಟರ್‌ಗಳು ತುರ್ತು ವೈದ್ಯಕೀಯ ಸೇವೆ, ಪ್ರವಾಸೋದ್ಯಮ, ರಕ್ಷಣಾ ಕಾರ್ಯಾಚರಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಳಕೆಯಾಗಲಿವೆ. ಮುಂದಿನ ಹಂತದಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಯೂ ರೂಪುಗೊಂಡಿದೆ.

Home add -Advt

ವೇಮಗಲ್ ಕೈಗಾರಿಕಾ ಪ್ರದೇಶವು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಚೆನ್ನೈ-ಬೆಂಗಳೂರು ವೇಗಮಾರ್ಗ ಸಮೀಪದಲ್ಲಿರುವುದು ಲಾಜಿಸ್ಟಿಕ್ಸ್ ದೃಷ್ಟಿಯಿಂದ ಅನುಕೂಲಕರವಾಗಿದೆ. ಘಟಕ ಆರಂಭದಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಹೆಚ್ಚಳವಾಗಲಿದ್ದು ಕೋಲಾರ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಹೊಸ ಉತ್ತೇಜನ ಸಿಗಲಿದೆ.

Related Articles

Back to top button