Film & EntertainmentKannada NewsKarnataka News

*ಕಿರುತೆರೆ ನಟಿ ರಶ್ಮಿಲೀಲಾ ನಿಧನ*

ಪ್ರಗತಿವಾಹಿನಿ ಸುದ್ದಿ: ಕಳೆದ ಒಂದು ವರ್ಷದ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿಲೀಲಾ ನಿಧನ ಹೊಂದಿದ್ದಾರೆ.

ನಟಿ ರಶ್ಮಿಲೀಲಾ ಅವರು, ಕೆಲ ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ನಟಿ ಇನ್ನಿಲ್ಲ ಎಂಬ ವಿಚಾರವನ್ನು ಅವರ ಪತಿ ಸಾರಕ್ಕಿ ಮಂಜು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2019ರಿಂದ ರಶ್ಮಿಲೀಲಾ ಅವರು ಪಲ್ಮನರಿ ಫೈಟ್ರೋಸಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದರು. ಸದ್ಯ ನಟಿಯ ನಿಧನಕ್ಕೆ ಸ್ಯಾಂಡಲ್ ವುಡ್ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button