Kannada NewsKarnataka NewsLatest
*ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಉಡುಪಿಯಲ್ಲಿ ಮತ್ತೋರ್ವ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಭಾರತೀಯ ನೌಕಾ ಪಡೆಯ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿಯಲ್ಲಿ ಆರೋಪಿಯನ್ನು ಬಂಧಿಸಿದ್ದು, ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಧಿತನನ್ನು 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಈತ ಪಶ್ಚಿಮ ಬಂಗಾಳ ಮೂಲದವನೆಂದು ತಿಳಿದುಬಂದಿದೆ. ಈತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಬಂಧಿತ ಬಾಂಗ್ಲಾದೇಶದ ಪ್ರಜೆ ಆಗಿರಬಹುದೆಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಸದ್ಯ ತನಿಖೆ ಮುಂದುವರೆದಿದೆ.



