*ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ರಾಜ್ಯಾದ್ಯಂತ ನಾಳೆ KSRTC ಬಸ್ ಸಂಚಾರದಲ್ಲಿ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 19 ರಂದು ನಾಳೆ ಕೆಎಸ್ಆರ್ಟಿಸಿ ನೌಕರರು ‘ಬೆಂಗಳೂರು ಚಲೋ’ ಪ್ರತಿಭಟನೆ ಆರಂಭಿಸಲಿದ್ದು. ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ವೇತನ ಪರಿಷ್ಕರಣೆ, ಹಿಂಬಾಕಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ಆರಂಭಿಸಲಿದ್ದಾರೆ.ಸಾರಿಗೆ ನೌಕರರ ಬೆಂಗಳೂರು ಚಲೋ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಈ ನಡುವೆ ಕರ್ತವ್ಯಕ್ಕೆ ಗೈರಾದರೆ ಶಿಸ್ತು ಕ್ರಮ ಹಾಗೂ ವೇತನ ಕಡಿತಗೊಳಿಸುವುದಾಗಿ ಕೆಎಸ್ಆರ್ಟಿಸಿ ಎಂಡಿ ಎಚ್ಚರಿಕೆ ನೀಡಿದ್ದಾರೆ. ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ಇನ್ನು ಸಾರಿಗೆ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಸಹ ಜನವರಿ 29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆಗೆ ಕರೆ ಕೊಡಲಾಗಿತ್ತು. ಆದರೆ, ಜನವರಿ 28 ರಂದು ಮುಖಂಡ ಅನಂತ್ ಸುಬ್ಬರಾವ್ ನಿಧನರಾದ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಗಿತ್ತು.



