Kannada NewsKarnataka NewsLatest

*ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಮಷಿನ್ ನನ್ನೇ ಕದ್ದೊಯ್ದ ಕಳ್ಳ*

ಪ್ರಗತಿವಾಹಿನಿ ಸುದ್ದಿ: ಕಳ್ಳರು ಚಿನ್ನಾಭರಣ, ಹಣ, ವಾಹನಗಳನ್ನು ಕದಿಯುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದೆರೆ ಇಲ್ಲೋರ್ವ ಕಳ್ಳ ಟಿಕೆಟ್ ಮಷಿನ್ ನನ್ನೇ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಮೆಜೆಸ್ಟಿಕ್​ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳ ಬಸ್ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದಿದ್ದಾನೆ. ಬೆಂಗಳೂರು-ಶಿರಸಿ ಮಾರ್ಗದ ನಾನ್-ಎಸಿ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿದೆ.

ಕಂಡಕ್ಟರ್ ಬ್ಯಾಗ್‌ನಲ್ಲಿದ್ದ ಟಿಕೆಟ್ ಮೆಷಿನ್ ಕಳ್ಳತನವಾಗಿದೆ. ಕೃತ್ಯದಿಂದಾಗಿ, ಮೆಜೆಸ್ಟಿಕ್ ನಿಲ್ದಾಣದಲ್ಲಿ ಬಸ್ ಎರಡು ಗಂಟೆಗಳ ಕಾಲ ನಿಂತಲ್ಲೇ ನಿಲ್ಲುವಂತಾಯಿತು. ಬಳಿಕ ಸಿಬ್ಬಂದಿ ಮ್ಯಾನುವಲ್​​ ಟಿಕೆಟ್ ನೀಡಿ ಬಸ್ ಸೇವೆ ಆರಂಭಿಸಿದ್ದಾರೆ. ಖದೀಮರು ಬ್ಯಾಗ್ ಕದ್ದೊಯ್ಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button