Kannada NewsKarnataka NewsLatest

*ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಇಷ್ಟು ದಿನ ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಲಂಚ ಆರೋಪ ಮಾಡುತ್ತಿದ್ದ ಸ್ನೇಹಮಯಿ ಕೃಷ್ಣ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಬರೋಬ್ಬರಿ 1.60 ಕೋಟಿ ಲಂಚ ಪಡೆದಿದ್ದಾರೆ. ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್ ಅವರಿಗೆ ಮುಂಬಡ್ತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಲಂಚದ ಹಣವನ್ನು ಕಪ್ಪು ಬಣ್ಣದ ಕಾರಿನಲ್ಲಿ ತಂದು ಸಿಎಸ್ ಶಾಲಿನಿ ರಜನೀಶ್ ಅವರಿಗೆ ಕೊಡಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೂ ಪತ್ರ ಬರೆದಿರುವುದಾಗಿ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

Home add -Advt


Related Articles

Back to top button