Karnataka NewsNationalPolitics

*ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: “ಸೋಲುವ ಭಯದಲ್ಲಿ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

Home add -Advt

ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಪಾಕಿಸ್ತಾನ ವಿಚಾರವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅವರು ದುರ್ಬಲರಾಗಿದ್ದಾರೆ. ಹೀಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ತಮ್ಮ ಕೆಲಸಗಳ ಬಗ್ಗೆ ಆತ್ಮವಿಶ್ವಾಸವಿಲ್ಲ, ತಮ್ಮ ಬದ್ಧತೆಯ ಬಗ್ಗೆಯೇ ವಿಶ್ವಾಸ ಇಟ್ಟುಕೊಂಡಿಲ್ಲ. ಈ ಬಾರಿ ಚುನಾವಣೆಯಲ್ಲಿ ಅವರ ಪಕ್ಷ ಸೋಲಲಿದೆ. ಹೀಗಾಗಿ ಹೀಗೆ ಮಾತನಾಡುತ್ತಿದ್ದಾರೆ” ಎಂದರು.

“ನಾನು ಮೊದಲು ಕಾಮಾಕ್ಯ ದೇವಾಲಯಕ್ಕೆ ಹೋಗಿ ಈ ರಾಜ್ಯದಲ್ಲಿ ಬದಲಾವಣೆ ತರುವಂತೆ ತಾಯಿ ಬಳಿ ಪ್ರಾರ್ಥಿಸಿದ್ದೇನೆ” ಎಂದು ತಿಳಿಸಿದರು.

Related Articles

Back to top button