EducationKannada NewsKarnataka NewsLatest

*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗಮನಕ್ಕೆ: ಸಮಾಜ ವಿಜ್ಞಾನ ಪರೀಕ್ಷೆ ಸಮಯ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ದಿನಾಂಕ: 28-02-2026 ರಂದು ನಡೆಯುವ ಎಸ್‌.ಎಸ್‌.ಎಲ್‌.ಸಿ 3ನೇ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪರೀಕ್ಷಾ ಸಮಯ ಬದಲಾವಣೆ ಮಾಡಿರುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.

2025-26ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3ನೇ ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ: 23-02-2026 ರಿಂದ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಆದರೆ, ದಿನಾಂಕ: 28-02-2026 ರಂದು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ, ಅಂದು ನಡೆಯುವ ಎಸ್‌.ಎಸ್‌.ಎಲ್‌.ಸಿ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಯ ಸಮಯವನ್ನು ಬೆಳಿಗ್ಗೆ 10 ರ ಬದಲಾಗಿ ಅಪರಾಹ್ನ 2 ಗಂಟೆಯಿಂದ ನಡೆಸುವಂತೆ ಈ ಮೂಲಕ ಸೂಚಿಸಿದೆ.

ಸದರಿ ವಿಷಯದ ಪ್ರಶ್ನೆ ಪತ್ರಿಕೆಯನ್ನು ಅದೇ ದಿನ ಮಧ್ಯಾಹ್ನ 12.30ಕ್ಕೆ ಮಂಡಳಿಯಿಂದ ಶಾಲಾ ಲಾಗಿನ್‌ಗೆ ಅಪ್ಲೋಡ್ ಮಾಡಲಾಗುವುದು. ಶಾಲಾ ಲಾಗಿನ್‌ನಲ್ಲಿ ಡೌನ್‌ಲೋಡ್ ಮಾಡಿ ಮುದ್ರಿಸಿಕೊಂಡು ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವುದು. ಉಳಿದಂತೆ ಇತರ ವಿಷಯಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಈ ವಿಷಯವನ್ನು ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು (ಆಡಳಿತ) ಅವರು ಕ್ರಮವಹಿಸಲು ತಿಳಿಸಿದೆ.

Home add -Advt

Related Articles

Back to top button