
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ರೈಲಿನ ಸಿ4 ಕೋಚ್ ಗೆ ಹಾನಿಯಾಗಿದೆ. ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ.
ಲಕ್ನೌ೦ದೆಹಲಿ ವಂದೇ ಭಾರತ್ ಎಕ್ಸ್ ಪ್ರೆಸ್ ನಲ್ಲಿ ಭಾಗವತ್ ಮೀರತ್ ಗೆ ತೆರಳುತ್ತಿದ್ದರು. ಈ ವೇಳೆ ಹರ್ದೋಯ್ ಬಳಿ ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ.
ಮುಂಜಾನೆ 3:20 ರ ಸುಮಾರಿಗೆ ಕಾಡಾ ಗ್ರಾಮದಲ್ಲಿ ರೈಲು ಬರುತ್ತಿದಂತೆ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ರೈಲಿನ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ.


