ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ರಿಷಿಕೇಶ್ ಎಸ್​ಐಟಿ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 18ನೇ ಆರೋಪಿ ರಿಷಿಕೇಶ್​ನನ್ನು 15 ದಿನಗಳ ಕಾಲ ಎಸ್​ಐಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.

ಗೌರಿ ಲಂಕೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೆ ಮತ್ತೊಬ್ಬ ಆರೋಪಿ ರಿಷಿಕೇಶ್ ದೇವಾಡಿಕರ್​​ ಅಲಿಯಾಸ್​ ಮುರಳಿ ಎಂಬಾತನನ್ನು ಎಸ್​ಐಟಿ ಪೊಲೀಸರು ಜಾರ್ಖಂಡ್​ನಲ್ಲಿ ಬಂಧಿಸಿದ್ದರು. ರಿಷಿಕೇಶ್​ನನ್ನು ಇಂದು ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಿದ ಎಸ್​ಐಟಿ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ 30 ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಎಸ್​ಐಟಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಆರೋಪಿಯನ್ನು 15 ದಿನಗಳ ಕಾಲ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಆರೋಪಿ ರಿಷಿಕೇಶ್ ಗೌರಿ ಲಾಂಕೇಶ್ ಹತ್ಯೆ ಸಂಬಂಧಿಸಿದ ಸಾಕ್ಷ್ಯ ನಾಶಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ. ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್​ಗಳನ್ನು ನಾಶ ಮಾಡಿದ್ದ ಎನ್ನಲಾಗಿದೆ. ಮೂರು ದಿನಗಳ ಹಿಂದೆ ಜಾರ್ಖಂಡ್ ಜಿಲ್ಲೆಯ ಖತ್ರಾಸ್​​ ಎಂಬ ಹಳ್ಳಿಯಲ್ಲಿ ಎಸ್​ಐಟಿ ಆರೋಪಿಯನ್ನು ಬಂಧಿಸಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button