*ಫೆ.22 ರಂದು ಬೆಳಗಾವಿಯಲ್ಲಿ ಜೆಡಿಎಸ್ ಯುವ ಸಮಾವೇಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಫೆ.22 ರಂದು ಜೆಡಿಎಸ್ ವತಿಯಿಂದ ಬೃಹತ್ ಬೈಕ್ ರ್ಯಾಲಿ ಹಾಗೂ ಯುವ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಹೇಳಿದರು.
ಶುಕ್ರವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ. 22 ರಂದು ಸಿಪಿಎಡ್ ಮೈದಾನದಿಂದ ಆರಂಭಗೊಳ್ಳಲಿರುವ ಜೆಡಿಎಸ್ ಬೈಕ್ ರ್ಯಾಲಿಯು ಚನ್ನಮ್ಮ ವೃತ್ತದ ಮಾರ್ಗವಾಗಿ ತೆರಳಿ ಗಾಂಧಿ ಭವನದವರೆಗೆ ನಡೆಯಲಿದೆ.
ಬಳಿಕ ಗಾಂಧಿ ಭವನದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ಸಮಾವೇಶ ನಡೆಯಲಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ. ಮುಂಬರುವ ತಾಪಂ, ಜಿಪಂ ಹಾಗೂ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಕಣಕ್ಕೆ ಇಳಿಯಲಿದ್ದಾರೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




