Karnataka NewsLatestPolitics

*ಪೊಲೀಸನ ಕಿರುಕುಳ, ಅಪಪ್ರಾಚಾರ: ವಾರದ ಹಿಂದೆ ಪತಿ ಕಳೆದುಕೊಂಡಿದ್ದ ಮಹಿಳೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಮಹಾಶಯನೊಬ್ಬ ವಾರದ ಹಿಂದಷ್ಟೆ ಪತಿಯನ್ನು ಕಳೆದುಕೊಂಡು ದುಃಖದಲ್ಲಿದ್ದ ವಿಧವೆ ಬಗ್ಗೆ ಅಪಪ್ರಚಾರ ಮಾಡಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಕೊರಳೊಡ್ಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ ಪೊಲೀಸ್​ ಸ್ಟೇಷನ್​ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್ ಎಂಬ ಪೊಲೀಸ್, ಮಹಿಳೆ ಸ್ವಾತಿ ಬಗ್ಗೆ ಅಪಪ್ರಚಾರ ಮಾಡಿದ್ದ ಇದರಿಂದ ನೊಂದ ಮಹಿಳೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ವಾಅರದ ಹಿಂದೆ ತಂದೆಯನ್ನು ಕಳೆದುಕೊಂಡಿದ್ದ ಮಕ್ಕಳು ಈಗ ತಾಯಿಯನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ.

ಸ್ವಾತಿ ಏಳು ವರ್ಷಗಳ ಹಿಂದೆ ಜಗದೀಶ್ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ವಾರದ ಹಿಂದಷ್ಟೇ ಸ್ವಾತಿ ಪತಿ ಜಗದೀಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇಂತಹ ಸ್ಥಿತನ್ನು ಮನುಷತ್ವವನ್ನೂ ಮರೆತ ಪೊಲೀಸ್ ಮೋಹನ್,​ ಸ್ವಾತಿಗೆ ಫೇಸ್​ಬುಕ್​ನಲ್ಲಿ ಮೆಸೇಜ್ ಮಾಡಿ ಕಾಟಕೊಡಲಾರಂಭಿಸಿದ್ದ. ಆತನ ಅಕೌಂಟ್​ ನ್ನು ಸ್ವಾತಿ ಬ್ಲಾಕ್ ಮಾಡಿದ್ದರಂತೆ. ಇದಕ್ಕೆ ಕೋಪಗೊಂಡ ಪೊಲೀಸ್ ಬೇರೆ ಅಕೌಂಟ್​ ನಿಂದ ಸ್ವಾತಿ ಬಗ್ಗೆ ಅಪಪ್ರಚಾರ ಮಾಡಿದ್ದನಂತೆ. ಈ ವಿಷಯ ಇಂದು ಬೆಳಿಗ್ಗೆ ಸ್ವಾತಿಗೆ ಗೊತ್ತಾಗಿದೆ.

ಮನನೊಂದ ಸ್ವಾತಿ, ಸಾರಿ ಅಮ್ಮ. ನನ್ನ ಬಗ್ಗೆ ಕೆಟ್ಟದಾಗಿ ಅಪಪ್ರಚಾರ ಮಾದಿ ಜನರ ಬಳಿ ಪೊಲೀಸ್ ಮೋಹನ್​ ಹೇಳಿದ್ದಾರೆ. ಇದರಿಂದ ನನಗೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ವಾರದ ಹಿಂದೆ ಪತಿಯನ್ನು ಕಳೆದುಕೊಂಡಿದ್ದೇನೆ. ಮೋಹನ್ ಎನ್ನುವ ಪೊಲೀಸ್ ನನ್ನ ಬಗ್ಗೆ ಕೆಟ್ಟದಾಗಿ ಜನರ ಬಳಿ ಏನೇನೋ ಹೇಳಿರುವುದು ನನಗೆ ಈಗ ಬೆಳಿಗ್ಗೆ ಗೊತ್ತಾಯಿತು. ಅವನನ್ನು ಮಾತ್ರ ಸಮ್ಮನೇ ಬಿಡಬೇಡಿ.

ನನಗೆ ಆತ ಯಾರು ಅಂತಾನೆ ಗೊತ್ತಿರಲಿಲ್ಲ. ಫೇಸ್​ಬುಕ್​ನಲ್ಲಿ ಮೆಸೇಜ್​​ ಮಾಡಿದ್ದರು. ನಾನು ಬ್ಲಾಕ್ ಮಾಡಿದೆ. ಅದೇ ಸಿಟ್ಟಿಗೆ ನನ್ನ ಬಗ್ಗೆ ಏನೇನೋ ಹೇಳಿದ್ದಾರೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ. ದಯವಿಟ್ಟು ಕ್ಷಮಿಸಿ ಅಮ್ಮ… ಎಂದು ಸ್ವಾತಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button