Kannada NewsKarnataka NewsNationalPolitics
*ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಶವ!*

ಪ್ರಗತಿವಾಹಿನಿ ಸುದ್ದಿ: ದಟ್ಟ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಶುಕ್ರವಾರ ಸಂಜೆ ವೇಳೆ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮಹಿಳೆಯ ಮೃತದೇಹ ಪತ್ತೆಯಾಗುತ್ತಿದ್ದಂತೆ ಸ್ಥಳಕ್ಕೆ ಮುಂಡಗೋಡು ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ರಂಡವಿಲ್ಲದ ಕಾರಣ ಮಹಿಳೆಯ ಗುರುತು ಪತ್ತೆಯಾಗಿಲ್ಲ. ರುಂಡವನ್ನು ಮೃತದೇಹದ ಸುತ್ತಮುತ್ತ ಬಿಸಾಡಿರಬಹುದುದೆಂದು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಎರಡು ದಿನದ ಹಿಂದೆ ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿ ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಾಗಳಲ್ಲಿ ತನಿಖೆ ನಡೆಸಿದ್ದಾರೆ.




