Belagavi NewsBelgaum NewsKannada NewsKarnataka NewsNationalPolitics

*ಹೈಕಮಾಂಡ್ ನಾಯಕರು ಶೀಘ್ರವೇ ಒಂದು ನಿರ್ಧಾರಕ್ಕೆ ಬರಲಿದ್ದಾರೆ: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಆಗಿರುವ ಮತ್ತು ಮುಂದಾಗುವ ಬೆಳವಣಿಗೆಗಳ ಕುರಿತು ಈ ವೇಳೆ ಚರ್ಚಿಸಲಾಯಿತು ಎಂದು ರಾಜಧಾನಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಖರ್ಗೆ ಅವರನ್ನು ಮಾಜಿ ಸಚಿವ ಕೆ.ಎನ್ ರಾಜಣ್ಣ ಜೊತೆಗೆ ಭೇಟಿಯಾಗಿ ಅರ್ಧ ಗಂಟೆಗಳ ಕಾಲ ಚರ್ಚಿಸಿದರು. ಬಳಿಕ ಮಾತನಾಡಿದ ಅವರು, ಖರ್ಗೆ ಅವರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದೆ. ಗೊಂದಲಗಳನ್ನು ಶೀಘ್ರ ಇತ್ಯರ್ಥ ಪಡಿಸುವಂತೆ ಮನವಿ ಮಾಡಿದ್ದೇವೆ. ಅವರು ಶೀಘ್ರ ಗೊಂದಲ ಇತ್ಯರ್ಥ ಪಡಿಸುವ ಭರವಸೆ ನೀಡಿದ್ದಾರೆ ಎಂದರು.

Home add -Advt

ಕರ್ನಾಟಕದಲ್ಲಿನ ಗೊಂದಲಗಳ ಕುರಿತು ಖರ್ಗೆ ಅವರ ಗಮನಕ್ಕೆ ತರಲಾಗಿದೆ ಗೊಂದಲಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಮನವಿ ಮಾಡಲಾಗಿದೆ.

ರಾಜ್ಯದಲ್ಲಿ ಸೃಷ್ಟಿಯಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರು ಒಂದು ತಾರ್ಕಿಕ ನಿರ್ಧಾರಕ್ಕೆ ಬಂದಿದ್ದಾರೆ, ಶೀಘ್ರದಲ್ಲಿ ಒಂದು ಅಂತಿಮ ನಿರ್ಧಾರ ಪ್ರಕಟಿಸಬಹುದು‌. 

ಆದಷ್ಟು ಬೇಗ ನಿರ್ಣಯ ಕೈಗೊಳ್ಳುವುದಾಗಿ ಮತ್ತು ಗೊಂದಲಗಳನ್ನು ತ್ವರಿತವಾಗಿ ಬಗೆಹರಿಸುವುದಾಗಿ ಖರ್ಗೆ ಭರವಸೆ ನೀಡಿದ್ದಾರೆ. ಈ ಕುರಿತು ಈಗಾಗಲೇ ಒಂದು ತೀರ್ಮಾನಕ್ಕೆ ಬರಲಾಗಿದೆ ಎಂದೂ ಖರ್ಗೆ ಮಾಹಿತಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪದೇ ಪದೇ ಅಧಿಕಾರದ ಗೊಂದಲಗಳು ಮತ್ತು ಹೇಳಿಕೆಗಳು ಬರದಂತೆ ಪೂರ್ಣವಿರಾಮ ಹಾಕಿ ಈ ಸಮಸ್ಯೆಗೆ ಶೀಘ್ರ ಇತ್ಯರ್ಥ ಸಿಗಬೇಕೆಂಬುದು ನಮ್ಮ ನಿರೀಕ್ಷೆ. ಯಾವುದೇ ವಿಳಂಬವಿಲ್ಲದೆ ಇದು ಬೇಗ ಮುಗಿದರೆ ಒಳ್ಳೆಯದು ಎಂದರು

ಮುಖ್ಯಮಂತ್ರಿ ಬದಲಾವಣೆಯೋ ಅಥಾವ ಇನ್ಯಾವ ನಿರ್ಧಾರವೋ ಗೊತ್ತಿಲ್ಲ. ಒಟ್ಟಿನಲ್ಲಿ ಹೈಕಮಾಂಡ್ ಒಂದು ಅಂತಿಮ ತಿರ್ಮಾನಕ್ಕೆ ಬನ್ನಿ ಎಂದು ಹೇಳಿದ್ದೇವೆ. ಅವರು ಪೂರಕವಾಗಿ ಮಾತನಾಡಿದ್ದು, ಆದಷ್ಟು ಬೇಗ ಎಲ್ಲವೂ ಸರಿಯಾಗಬಹುದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

Related Articles

Back to top button