Kannada NewsLatestNational

*BREAKING: ಭೀಕರ ಅಪಘಾತ: ಐವರು ಪೊಲೀಸರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಪೊಲೀಸರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಟಿಪ್ಪರ್ ವಾಹನ ಹಾಗೂ ಪೊಲೀಸ್ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಐವರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಗೈ ಗಾಯಗೊಂಡಿದ್ದಾರೆ. ಈ ಘಟನೆ ಒಡಿಶಾದ ಜಾರ್ಸುಗುಡಾ ಜಿಲ್ಲೆಯಲ್ಲಿ ಸಾದರ್ ಪೊಲೀಸ್ ಸ್ಟೇಷನ್ ಮುಂಭಾಗ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ವ್ಯಾನ್ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಐವರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಸಬ್ ಇನ್ಸ್ ಪೆಕ್ಟರ್ ನಿರಂಜನ್ ಕುಜೂರ್, ಲಿಂಗರಾಜ್ ಧುರುವಾ, ಕಾಶಿರಾಮ್ ಭೋಯ್, ದೇಬ್ಡತ್ ಸಾ, ಭಕ್ರಬಂಧು ಮಿರ್ದಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button