
ಪ್ರಗತಿವಾಹಿನಿ ಸುದ್ದಿ: ದೇಶದ ಹಲವೆಡೆ ಬಾಅಂಬ್ ಸ್ಫೋಟ ನಡೆಸಿ, ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ 8 ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಪಾಕ್ ಐಎಸ್ ಐ ಮತ್ತು ಬಾಂಗ್ಲಾ ಮೂಲದ ಉಗ್ರ ಸಂಘಟನೆಗಳ ನೆರವು ಪಡೆದು ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ೮ ಉಗ್ರರನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆದ ಜಂಟಿ ಕಾರ್ಯಾಚರಣೆ ವೇಳೆ ಬಂಧಿಸಲಾಗಿದೆ.
ತಮಿಳುನಾಡಿನ ತಿರುಪ್ಪೂರ್ ನ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ 6 ಉಗ್ರರು ಹಾಗೂ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿದ್ದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬಂಧಿತರು ಬಾಂಗ್ಲಾ ಮೂಲದವರಾಗಿದ್ದು, ನಕಲಿ ಆಧಾರ್ ಕಾರ್ಡ್ ಬಳಸಿ ಗುರುತು ಮರೆ ಮಾಚಿದ್ದರು.
ಬಂಧಿತ ಉಗ್ರರ ಬಳಿ ಇದ್ದ 8 ಮೊಬೈಲ್ ಗಳು, 16 ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಉಗ್ರರ ಬಂಧನದ ಬೆನ್ನಲ್ಲೇ ದೇಶಾದ್ಯಂತ ಅಲರ್ಟ್ ಘೋಷಿಸಲಾಗಿದೆ.




