Karnataka NewsLatestPolitics

*ಲೋಕಾಯುಕ್ತ ಬಲೆಗೆ ಬಿದ್ದ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​​ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿಯನ್ನೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ನ್ಯಾಯಾಧೀಶರ ಆದೇಶದ ಅನ್ವಯ ಶಾಸಕರು ಪರಪ್ಪನ ಅಗ್ರಹಾರ ಜೈಲುಸೇರಿದ್ದಾರೆ.

ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎಗಳಿಗೆ ಮಾರ್ಚ್‌ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button