*1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ದೇಸೂರ್ ಗ್ರಾಮದ ಕಮಲ ನಗರದಲ್ಲಿ ಸುಮಾರು 1 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನ ಮಾಡಿ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿದ್ದಾರೆ. ಗ್ರಾಮದಲ್ಲಿ ನಿರಂತರ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿದ್ದು, ಜನರ ನಿರಂತರ ಬೆಂಬಲ, ಸಹಕಾರ ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಸಹ ಇದೇ ಬೆಂಬಲ ನೀಡಬೇಕೆಂದು ಸಚಿವರು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಬಳಿಕ, ಗ್ರಾಮದಲ್ಲಿ ಸುಮಾರು 25 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಾರುತಿ ದೇವಸ್ಥಾನದ ಕಟ್ಟಡ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಆದಷ್ಟು ಬೇಗ ಉತ್ತಮ ಗುಣಮಟ್ಟದೊಂದಿಗೆ ದೇವಸ್ಥಾನದ ಕಾರ್ಯ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ವೇಳೆ ನಿಂಗಪ್ಪ ಕೊರವಿ, ಭರಮಪ್ಪ ಪೂಜೇರಿ, ಪರಶುರಾಮ ಪೂಜೇರಿ, ದುರಗಪ್ಪ ನಾಯ್ಕ್, ಕಮಲೇಶ ಕೊರವಿ, ಮಹಿಳೆಯರು, ಗುತ್ತಿಗೆದಾರರು ಮುಂತಾದವರು ಉಪಸ್ಥಿತರಿದ್ದರು.



