*ಅಧಿಕ ಡೋಸೆಜ್ ಇಂಜಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ: ವೈದ್ಯಕೀಯ ವಿದ್ಯಾರ್ಥಿಯೊಬ್ಬ ಅಧಿಕಾ ದೋಸೇಜ್ ಇಂಜಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ.
ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿ ಇಂಟರ್ನ್ಯಾಷನಲ್ ಹಾಸ್ಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿ ಸಿದ್ಧಾರ್ಥ ತ್ರಯಂಬಕೆ (30) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥ ತ್ರಯಂಬಕೆ ಡರ್ಮಾಟಾಲಾಜಿ ವಿಭಾಗದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ. ಹಾನಿಕಾರಕ ಅಥವಾ ಅಧಿಕ ಡೋಸೆಜ್ ಇಂಜೆಕ್ಷನ್ ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ನಿನ್ನೆ ಮಧ್ಯಾಹ್ನದಿಂದ ರೂಮ್ ಲಾಕ್ ಆಗಿದ್ದ ಹಿನ್ನೆಲೆಯಲ್ಲಿ ಅನುಮಾನ ಬಂದು ಇಂದು ಕೊಠಡಿ ಬಾಗಿಲು ಒಡೆದು ಒಳಗೆ ಹೋದಾಗ ಆತ್ಮಹತ್ಯೆ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


