Kannada NewsKarnataka NewsLatest

*ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಗೆ ಖಂಡನೆ: ಮೂರು ತಾಲೂಕುಗಳು ಬಂದ್*

ಪ್ರಗತಿವಾಹಿನಿ ಸುದ್ದಿ: ಕಾಡಾನೆ ದಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಕ್ಕೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದನ್ನು ಖಂಡಿಸಿ ಚಿಕ್ಕಮಗಳೂರಿನ ಮೂರು ತಾಲೂಕುಗಳನ್ನು ಬಂದ್ ಮಾಡಿ ಮುಷ್ಕರ ನಡೆಸಲಾಗುತ್ತಿದೆ.

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬೋರಮ್ಮ ಮೃತಪಟ್ಟ ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂದಿತ್ತು. ಸಾರ್ವಜನಿಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರು.

ಪ್ರತಿಭಟನೆ ನಡೆಸಿದ 29ಕ್ಕೂ ಹೆಚ್ಚು ಜನರ ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್​ಐಆರ್ ದಾಖಲಾಗಿವೆ. ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ, ಪೊಲೀಸ್ ವಾಹನಗಳನ್ನು ಪಲ್ಟಿ ಮಾಡುವ ಯತ್ನ, ಮತ್ತು ರಸ್ತೆ ತಡೆ ನಡೆಸಿದ ಆರೋಪದ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಈ ಘಟನೆಗಳಲ್ಲಿ ಹತ್ತಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.

Home add -Advt

ಕಾಡಾನೆ ದಾಳಿ ಮತ್ತು ನಂತರದ ಲಾಠಿಚಾರ್ಜ್ ಖಂಡಿಸಿ ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ, ಎನ್.ಆರ್.ಪುರ, ಮತ್ತು ಶೃಂಗೇರಿ ಮೂರು ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ.

ಮೂರು ತಾಲೂಕುಗಳಲ್ಲಿ ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಾಳೆಹೊನ್ನೂರಿನ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯುತ್ತಿದೆ.


Related Articles

Back to top button