Belagavi NewsBelgaum NewsKannada NewsKarnataka News

*ಇಂದು ಮಳೆ ಸಾಧ್ಯತೆ: ಐದು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. 

ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಬೀದರ್, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. 

Home add -Advt

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. 

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

Related Articles

Back to top button