Belagavi NewsBelgaum NewsCrimeKannada NewsKarnataka NewsNational

*ಬೆಳಗಾವಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಗರ್ಭಿಣಿ ಪತ್ನಿಗೆ ಚಾಕು ಇರಿದು ಆತ್ಮಹತ್ಯೆ ಮಾಡಿಕೊಂಡ ಪತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗರ್ಭಿಣಿ ಪತ್ನಿಗೆ ಚಾಕು ಇರಿದು ಬಳಿಕ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು, ಎಲ್ಲರನ್ನು ಬೆಚ್ಚಿಬಿಳಿಸುವಂತೆ ಮಾಡಿದೆ.

ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ರಾಮದುರ್ಗ ಪಟ್ಟಣದ ನಿವಾಸಿ ಉಮೇಶ ಬಡಿಗೇರ (34) ಮೃತ ದುರ್ದೈವಿ. ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಉಮೇಶ ಸಾರಾಯಿ ಕುಡಿದು ಬಂದು ಜಗಳ ಮಾಡುತ್ತಿದ್ದ. ಮೊನ್ನೆ ಮತ್ತೆ ಜಗಳ ಆಗಿದೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ತಾನು ಕೂಡ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಾಕು ಇರಿತದಿಂದ ಗಂಭೀರ ಗಾಯಗೊಂಡ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಸಧ್ಯ ಗರ್ಭಿಣಿ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮೃತ ಉಮೇಶ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ.

ಈ ಘಟನೆ ಸಂಬಂಧ ಮೃತ ಉಮೇಶ ಬಡಿಗೇರ ಅವರ ಸಹೋದರ ನಾರಾಯಣ ಬಡಿಗೇರ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾನೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 

ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ರಾಮದುರ್ಗ ಪೊಲೀಸರು ಮಾಹಿತಿ ನೀಡಿದ್ದಾರೆ. ಉಮೇಶನ ಮೃತದೇಹವನ್ನು ಪೊಲೀಸರು ಬಾವಿಯಿಂದ ಹೊರಗೆ ತೆಗೆದಿದ್ದು, ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button