Kannada NewsLatestNational

*150 ಪ್ರಯಾಣಿಕರಿದ್ದ ಸ್ಪೈಸ್ ಜೆಟ್ ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಇಂಜಿನ್ ವೈಫಲ್ಯದಿಂದಾಗಿ ಸ್ಪೈಸ್ ಜೆಟ್ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ದೆಹಲಿಯಿಂದ ಲೇಹ್ ಗೆ 150 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸ್ಪೈಸ್ ಜೆಟ್ SG121 ವಿಮಾನದಲ್ಲಿ ಇಂಜಿನ್ ನಲ್ಲಿ ದೋಷ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಮಾನ ಮತ್ತೆ ದೆಹಲಿಗೆ ವಾಪಸ್ ಆಗಿದ್ದು, ಏರ್ ಪೋರ್ಟ್ ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.

ವಿಮಾನದಲ್ಲಿದ್ದ ಪ್ರಯಾಣಿಕರು, ವಿಮಾನ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button