Kannada NewsKarnataka NewsLatest
*ಮದುವೆ ಮನೆಯಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ಫೋಟೋಗ್ರಾಫರ್ ಸಾವು*

ಪ್ರಗತಿವಾಹಿನಿ ಸುದ್ದಿ: ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ದುರಂತ ಸಂಭವಿಸಿದ್ದು, ಆರತಕ್ಷತೆ ಫೋಟೋಗಳನ್ನು ತೆಗೆಯುತ್ತಿದ್ದ ಯುವ ಫೋಟೋಗ್ರಾಫರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಈ ಘಟನೆ ನಡೆದಿದೆ. ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ದುರ್ದೈವಿ. ಮದುವೆ ಮಂಟಪದಲ್ಲಿ ಮದುವೆಯ ಫೋಟೋಗಳನ್ನು ತೆಗೆಯುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೋಟೋಗ್ರಾಫರ್ ಸಾವಿನಿಂದ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.



