Kannada NewsKarnataka NewsLatestPolitics

*ಶಾಸಕ ಯತ್ನಾಳ್ ಗೆ ಬಿಗ್ ಶಾಕ್: ಸುಮೋಟೋ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಮಹಾತ್ಮಾ ಗಾಂಧೀಜಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದ ಶಾಸಕ ಯತ್ನಾಳ್​​, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿದ್ದಾರೆ.

Home add -Advt

ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು, ಜವಾಹರ ಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ನಾನು ಒಪ್ಪಿಕೊಳ್ಳಲ್ಲ. ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಕಾಶ್ಮೀರಕ್ಕೆ 370 ಕೊಟ್ಟಿದ್ದು ಯಾಕೆಂದ್ರೆ ಫಾರೂಕ್ ಅಬ್ದುಲ್ಲಾ ಜೊತೆ ನೆಹರುಗೆ ಲಿಂಕ್ ಇತ್ತು. ಇವರೆಲ್ಲರೂ ದೇಶದ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ. ಕೋಲ್ಕತ್ತಾದಿಂದ 555 ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧಿ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತಾ? ಹಾಗಿದ್ರೆ ನಾನು ಚರಕ ತಿರುಗಿಸುತ್ತೇನೆ, ನಾಳೆ ರಾಜ್ಯದ ಸಿಎಂ ಆಗ್ತೀನಾ? ಎಂದು ಯತ್ನಾಳ್​​ ಪ್ರಶ್ನಿಸಿದ್ದರು. ಅಲ್ಲದೆ ಭಾರತದಲ್ಲಿರುವ ಮುಸ್ಲಿಮರು ಒಂದೇ ಮಾತರಂ ಹೇಳಬೇಕು. ಇಲ್ಲದಿದ್ದರೆ ಗಾಂಧಿ ಕೊಟ್ಟ ಪಾಕಿಸ್ತಾನಕ್ಕೆ ಹೋಗಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಲವ್ ಜಿಹಾದ್ ಕುರಿತು ಉಲ್ಲೇಖಿಸಿ, ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.

Related Articles

Back to top button