Kannada NewsKarnataka NewsLatest

*ಬೆಳಗಾವಿ ಸೇರಿ ಈ 5 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇಂದು ರಾಜ್ಯದಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ರಾಜ್ಯದ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೀದ‌ರ್, ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಗದಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

Home add -Advt

ಉತ್ತರ ಒಳನಾಡಿನ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಮೈಸೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Related Articles

Back to top button