Film & EntertainmentKannada NewsKarnataka NewsLatest

*ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ*

ಪ್ರಗತಿವಾಹಿನಿ ಸುದ್ದಿ: ಬಹುಭಾಷಾ ನಟಿ, ನ್ಯಾಷನಲ್ ಕೃಷ್ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಇಂದು ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಎರಡೂ ಕುಟುಂಬದ ಸದಸ್ಯರು, ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ವಿಜಯ್ ದೇವರಕೊಂಡ, ರಶ್ಮಿಕಾ ಅವರಿಗೆ ತಾಳಿ ಕಟ್ಟುವ ಮೂಲಕ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Home add -Advt

ಕೆಲ ವರ್ಷಗಳಿಂದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು, ಇದೀಗ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಉದಯಪುರದಲ್ಲಿ ಕಳೆದ ಕೆಲ ದಿನಗಳಿಂದಲೂ ಮದುವೆ ಕಾರ್ಯಗಳು ನಡೆಯುತ್ತಲೇ ಇದ್ದವು. ನಿನ್ನೆ ಹಳದಿ ಮತ್ತು ಸಂಗೀತ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎರಡು ದಿನಗಳ ಹಿಂದೆ ತೆಲಂಗಾಣದಿಂದ ಪುರೋಹಿತರ ತಂಡವೊಂದು ಮದುವೆ ಕಾರ್ಯಕ್ರಮಕ್ಕೆಂದು ಉದಯಪುರಕ್ಕೆ ಬಂದಿದ್ದು, ಇಂದು ತೆಲಗು ಸಂಪ್ರದಾಯಂತೆ ಅದ್ದೂರಿಯಾಗಿ ಮದುವೆ ನೆರವೇರಿದೆ. ಕೊಡಗು ಸಂಪ್ರದಾಯಂತೆ ಮತ್ತೊಮ್ಮೆ ಮದುವೆ ಶಾಸ್ತ್ರಗಳು ನಡೆಯಲಿವೆ ಎಂದು ತಿಳಿದುಬಂದಿದೆ.


Related Articles

Back to top button