CrimeKannada NewsKarnataka NewsLatest

*ತಾಯಿ ಮುಂದೆಯೇ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಕೆಲ ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ರೌಡಿಶೀಟರ್​ನನ್ನು ತಾಯಿಯ ಮುಂದೆಯೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.

ಬೆಂಗಳೂರಿನ ಥಣಿಸಂದ್ರದ ಅಮರಜ್ಯೋತಿ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದಿನ ಕೃತ್ಯಕ್ಕೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಪವನ್ ಕುಮಾರ್‌ (28) ಕೊಲೆಯಾದವನು. ಹೆಲ್ಮೆಟ್ ಧರಿಸಿ ಮೂರು ದ್ವಿಚಕ್ರ ವಾಹನಗಳಲ್ಲಿ ಆರು ಮಂದಿ ದುಷ್ಕರ್ಮಿಗಳು ಪವನ್‌ನ ಮನೆ ಬಳಿ ಬಂದು ಆತನ ತಾಯಿಯ ಕಣ್ಣೆದುರೇ ಕೃತ್ಯ ಎಸಗಿದ್ದಾರೆ.

ಮೂರು ವರ್ಷಗಳ ಹಿಂದೆ ನಡೆದಿದ್ದ ರೌಡಿಶೀಟರ್ ಕಪಿಲ್ ಹತ್ಯೆ ಪ್ರರಣದಲ್ಲಿ ಬಂಧಿತನಾಗಿದ್ದ ಪವನ್ ಕಳೆದ ಮೇ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ. ಒಂದೂವರೆ ತಿಂಗಳ ಹಿಂದಷ್ಟೆ ಬೇಕರಿಯನ್ನ ಆರಂಭಿಸಿದ್ದ. ಆದರೆ ಕಪಿಲ್‌ನ ಹತ್ಯೆಯಾದ ಮಾದರಿಯಲ್ಲೇ ಹೆಲ್ಮೆಟ್ ಧರಿಸಿದ್ದ ದುಷ್ಕರ್ಮಿಗಳು ಪವನ್ ಕುಮಾರ್‌ ಹತ್ಯೆ ಮಾಡಿದ್ದಾರೆ. ಕಪಿಲ್‌ನ ಸಹೋದರ ಸೇರಿದಂತೆ ಹಲವರ ವಿರುದ್ಧ ಈ ಹತ್ಯೆಯ ಆರೋಪ ಕೇಳಿಬಂದಿದೆ.

Home add -Advt

Related Articles

Back to top button