Film & EntertainmentLatestNational

*ಕಾಲಿವುಡ್ ನಟ ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು*

ಪ್ರಗತಿವಾಹಿನಿ ಸುದ್ದಿ: ಕಾಲಿವುಡ್ ಖ್ಯಾತ ನಟ, ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಜಯ್ ಪತ್ನಿ ಸಂಗೀತಾ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ.

ದಳಪತಿ ವಿಜಯ್ ಅವರಿಗೆ ಖ್ಯಾತ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಕೆಲ ವರ್ಷಗಳಿಂದ ವಿಜಯ್ ಅವರ ಹೆಸರು ಆ ನಟಿಯೊಂದಿಗೆ ತಳುಕು ಹಾಕಿಕೊಂಡಿತ್ತು, ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಚರ್ಚೆಯಾಗುತ್ತಿದ್ದಂತೆ ನಟಿ ಇದನ್ನು ನಿರಾಕರಿಸಿದ್ದರು. ಆದರೆ ಈಗ ವಿಜಯ್ ಪತ್ನಿ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿರುವುದು ವಿಜಯ್ ಹಾಗೂ ಸಂಗೀತಾ ದಾಂಪತ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟವಾದಂತಿದೆ.

Home add -Advt

ವಿಜಯ್ ನಟಿಸಿರುವ ಕೊನೇ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗದೇ ಸೆನ್ಸಾರ್ ಮಂಡಿಳಿಂದ ಅನುಮತಿ ಸಿಗದೇ ಸಮಸ್ಯೆಗೆ ಸಿಲುಕಿದೆ. ಈ ನಡುವೆ ವಿಜಯ್ ಟಿವಿಕೆ ಪಕ್ಷದ ಮೂಲಕ ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಎಲ್ಲದರ ನಡುವೆ ಇದೀಗ ಪತ್ನಿ ಸಂಗೀತಾ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ವೇಳೆ ಹಲವು ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ.

Related Articles

Back to top button