ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಇಬ್ಬರು ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನಿರ್ಭಯಾ ಪ್ರಕರಣ ನಾಲ್ವರು ಅಪರಾಧಿಗಳ ಪೈಕಿ ಇಬ್ಬರು ಅಪರಾಧಿಗಳಾದ ವಿನಯ್ ಶರ್ಮಾ ಹಾಗೂ ಮುಖೇಶ್ ತಮಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ನ್ಯಾ. ಎನ್.ವಿ. ರಮಣ್, ನ್ಯಾ. ಅರುಣ್ ಮಿಶ್ರಾ, ನ್ಯಾ. ಆರ್.ಎಫ್. ನಾರಿಮನ್, ನ್ಯಾ. ಭಾನುಮತಿ ಹಾಗೂ ನ್ಯಾ. ಅಶೋಕ್ ಭೂಷಣ್ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿ, ಕ್ಯುರೇಟಿವ್ ಅರ್ಜಿ ವಜಾಗೊಳಿಸಿ ತೀರ್ಪು ಪ್ರಕಟಿಸಿದೆ.
ಈ ಮೂಲಕ ಅಪರಾಧಿಗಳಿಗೆ ಇದ್ದ ಕೊನೆಯ ಕಾನೂನಿನ ಅವಕಾಶವೂ ಮುಗಿದಿದ್ದು, ಪ್ರಕರಣದ ನಾಲ್ವರು ಅಪರಾಧಿಗಳಾದ ವಿನಯ್ ಶರ್ಮಾ,ಮುಖೇಶ್, ಪವನ್ ಗುಪ್ತಾ, ಅಕ್ಷಯ್ ಕುಮಾರ್ ಸಿಂಗ್ ಗೆ ಜ. 22ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲುಶಿಕ್ಷೆ ವಿಧಿಸುವುದು ಖಚಿತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ