
ಪ್ರಗತಿವಾಹಿನಿ ಸುದ್ದಿ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 15 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ನಾಗ್ಪುರದ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಈ ಘಟನೆ ಸಂಭವಿಸಿದೆ. ಗನ್ ಪೌಡರ್ ತಯಾರಿಸುವ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಮಹಿಳೆಯರು ಸೇರಿ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ. 18 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆ ಪಾಳಿಗೆ ಕೆಲಸಕ್ಕೆ ಬಂದಿದ್ದ 35 ಕಾರ್ಮಿಕರು ಸ್ಥಳದಲ್ಲಿದ್ದರು.ಕಟೋಲ್ ತಹಸಿಲ್ನ ರೌಲ್ಗಾಂವ್ನಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕರಾದ ಎಸ್ಬಿಎಲ್ ಎನರ್ಜಿ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ .


