Kannada NewsLatestWorld

*ಕರಾಚಿಯಲ್ಲಿ ಅಮೆರಿಕಾ ರಾಯಭಾರ ಕಚೇರಿ ಮೇಲೆ ದಾಳಿ: ಬೆಂಕಿ ಹಚ್ಚಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಇರಾನ್ ಮೇಲೆ ಅಮೆರಿಕಾ ಹಾಗೂ ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಅವರ ಮಗಳು-ಅಳಿಯ ಸೇರಿದಂತೆ ಕುಟುಂಬದ ಹಲವರು ಮೃತಪಟ್ಟಿದ್ದಾರೆ. ಅಲಿ ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕಾ ರಾಯಭಾರ ಕಚೇರಿ ಬಳಿ ಜಮಾವಣೆಗೊಂಡಿರುವ ಜನರು ರಾಯಭಾರ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ, ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಅಲ್ಲದೇ ಅಮೆರಿಕಾ ರಾಯಭಾರ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

Related Articles

Back to top button