Belagavi NewsBelgaum NewsKannada NewsKarnataka News

*ಬೆಳಗಾವಿ ನಗರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೋಳಿ ಹಾಗೂ ರಂಗಪಂಚಮಿ ಹಬ್ಬ-2026 ರ ಅಂಗವಾಗಿ ಬೆಳಗಾವಿ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧಿಸಿದ ನಗರ ಪೊಲೀಸ್ ಆಯುಕ್ತರು ಆದೇಶ ಹೋರಡಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21(1) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಅಡಿಯಲ್ಲಿ ಬೆಳಗಾವಿ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ:02/03/2026 ರಂದು ಮದ್ಯಾಹ್ನ 14.00 ಗಂಟೆಯಿಂದ ದಿನಾಂಕ:03/03/2026ರ ರಾತ್ರಿ 23.59 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿಸಲಾಹಿದೆ.

ಈ ವೇಳೆ ಮದ್ಯದ ಅಂಗಡಿಗಳಲ್ಲಿ, ವೈನಶಾಪ್, ಬಾರ್‌ಗಳಲ್ಲಿ, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್‌ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ, ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‌ಬಿಸಿಎಲ್ ಡಿಪೋಗಳನ್ನು, ಹೊಟೇಲ್‌ಗಳಲ್ಲಿರುವ ಬಾರ್‌ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಮಾಡವೇಕು, ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್‌ಪೆಕ್ಟರ್ ಹಾಗೂ ಉಪ ವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(2) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಪ್ರಕಾರ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆದೇಶಿಸಲಾಗಿದೆ.

Home add -Advt

Related Articles

Back to top button