Kannada NewsKarnataka NewsNationalPoliticsTravelWorld

*ಯುದ್ಧ ಪೀಡಿತ ಪ್ರದೇಶದಿಂದ ಭಾರತೀಯರನ್ನು ಕರೆತರಲು 10 ವಿಮಾನಗಳ ಕಾರ್ಯಾಚರಣೆ*

ಪ್ರಗತಿವಾಹಿನಿ ಸುದ್ದಿ: ಯುದ್ಧದ ಕಾರಣ ವಿವಿಧೆಡೆ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಇಂಡಿಗೊ ಏರ್​ಲೈನ್ಸ್​ನ 10 ವಿಶೇಷ ವಿಮಾನಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ.

ಮಂಗಳವಾರ ಜೆದ್ದಾಗೆ ತೆರಳಿ ಭಾರತೀಯರನ್ನು ಕರೆತರಲು ಉದ್ದೇಶಿಸಿವೆ ಎಂದು ಸಚಿವಾಲಯ ತಿಳಿಸಿದೆ. ಜೆದ್ದಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಇಂಡಿಗೋ ಸಂಪರ್ಕದಲ್ಲಿದೆ. ಯಾವ ವಾಯುಮಾರ್ಗದ ಮೂಲಕ ಕಾರ್ಯಾಚರಣೆ ನಡೆಸಬಹುದು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಅಲ್ಲಿ ಸಿಲುಕಿರುವ ಪ್ರಯಾಣಿಕರ ಸುರಕ್ಷಿತ ವಾಪಸಾತಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚುವರಿ ವಿಮಾನಗಳನ್ನು ಕಳುಹಿಸಲಾಗುವುದು. ವಿದೇಶಿ ವಿಮಾನಯಾನ ಸಂಸ್ಥೆಗಳು ಮತ್ತು ಭಾರತೀಯ ದೂತಾವಾಸ ಕಚೇರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಈ ನಿರ್ಧಾರಕ್ಕೆ ಬರಲಾಯಿತು. 

ನಿರ್ಬಂಧಿತ ವಾಯುಪ್ರದೇಶದ ಬದಲಿಗೆ ಪರ್ಯಾಯ ಮಾರ್ಗಗಳ ಮೂಲಕ ದೀರ್ಘ ಹಾಗೂ ಅತಿ ದೀರ್ಘ ದೂರದ ವಿಮಾನ ಸೇವೆಗಳನ್ನು ಹಂತ ಹಂತವಾಗಿ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿಮಾನಗಳು ಮತ್ತು ಸಿಬ್ಬಂದಿಯ ಮರುಸ್ಥಾಪನೆ ಕಾರ್ಯವೂ ಪ್ರಗತಿಯಲ್ಲಿ ಇದೆ ಎಂದು ಸಚಿವಾಲಯ ತಿಳಿಸಿದೆ.

Home add -Advt

ಭಾರತ ಮತ್ತು ಗಲ್ಫ್ ರಾಷ್ಟ್ರಗಳ ನಡುವೆ ಸಂಚರಿಸುವ ವಿದೇಶಿ ವಿಮಾನ ಸಂಸ್ಥೆಗಳೂ ಮಿತ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲ ವಿಮಾನಯಾನ ಸಂಸ್ಥೆಗಳಿಗೂ ಪ್ರಯಾಣಿಕರೊಂದಿಗೆ ಪಾರದರ್ಶಕವಾಗಿ ಮಾಹಿತಿ ಹಂಚಿಕೊಳ್ಳುವಂತೆ ಸೂಚಿಸಲಾಗಿದೆ. 

ರೀಫಂಡ್, ಪ್ರಯಾಣದ ಸಮಯ ಮರುನಿಗದಿ ಸೇರಿದಂತೆ ನಿಯಮಾನುಸಾರ ಸೇವೆಗಳನ್ನು ಒದಗಿಸುವಂತೆ ಸೂಚಿಸಲಾಗಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ತಮ್ಮ ವಿಮಾನಗಳ ಸ್ಥಿತಿಯನ್ನು ಸಂಬಂಧಿತ ವಿಮಾನಯಾನ ಸಂಸ್ಥೆಗಳ ಅಧಿಕೃತ ಮೂಲಗಳಿಂದ ಪರಿಶೀಲಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Related Articles

Back to top button