*ಶಾಸಕ ಅಭಯ ಪಾಟಿಲ್ ನೇತೃತ್ವದಲ್ಲಿ ಅದ್ಧೂರಿಯಾಗಿ ನಡೆದ ಹೋಳಿ ಮಿಲನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಭಯ ಪಾಟಿಲ್ ಅವರ ನೇತೃತ್ವದಲ್ಲಿ 2026ರ ಸಾಲಿನ ‘ಹೋಳಿ ಮಿಲನ್’ ಕಾರ್ಯಕ್ರಮ ಸಂಭ್ರಮ ಸಡಗರದಿಂದ ನಡೆಯಿತು.
ಬೆಳಗಾವಿಯ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಅಭಯ ಪಾಟಿಲ್ ಅವರ ನೇತೃತ್ವದಲ್ಲಿ ನಡೆಯದ ಹೋಳಿ ಮಿಲನ್ ಕಾರ್ಯಕ್ರಮವು ಸತತ 15 ವರ್ಷದಿಂದ ಅದ್ಧೂರಿಯಾಗಿ ನಡೆದಿದೆ.

ಈ ಬಣ್ಣಗಳ ಹಬ್ಬದ ಆಚರಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು. ಹೋಳಿ ಮಿಲನ್ ಕಾರ್ಯಕ್ರಮದಲ್ಲಿ ಸಾವಿರಾರು ಯುವಕ ಯುವತಿಯರು ಬಣ್ಣದಲ್ಲಿ ಮಿಂದೆದ್ದು, ಡಿಜೆ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಎಂಜಾಯ್ ಮಾಡಿದ್ರು.
ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಕ – ಯುವತಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಸ್ಪರ ಬಣ್ಣ ಎರಚಿಕೊಂಡು ಕುಣಿದು ಕುಪ್ಪಳಿಸಿದರು. ಇದೇವೇಳೆ ನೃತ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆದವು.
ಕೋಮು ಸೌಹಾರ್ದತೆ, ಏಕತೆ ಮತ್ತು ಸಹೋದರತ್ವವನ್ನು ಸಾರುವ ಉದ್ದೇಶದಿಂದ ಈ ಬೃಹತ್ ಹೋಳಿ ಉತ್ಸವವನ್ನು ಶಾಸಕ ಅಭಯ ಪಾಟಿಲ್ ನೇತೃತ್ವದಲ್ಲಿ ಪ್ರತಿವರ್ಷ ಹಮ್ಮಿಕೊಳ್ಳಲಾಗುತ್ತದೆ.



