Kannada NewsKarnataka NewsLatest

*ಮಟ್ಕಾ ದಂಧೆ ಪ್ರಕರಣ: PSI ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ರಾಜಾರೋಷವಾಗಿ ಮಟ್ಕಾ ದಂಧೆ ನಡೆಯುತ್ತಿರುವ ಕಾರಣ ಕರ್ತವ್ಯಲೋಪ ಹಿನ್ನೆಲೆ ಹಾವೇರಿ ಜಿಲ್ಲೆಯ ಗುತ್ತಲ ಠಾಣೆಯ ಪಿಎಸ್ ಐ ಬಸನಗೌಡ ಬಿರಾದಾರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ದಾವಣಗೆರೆ ಪೂರ್ವ ವಲಯ ಐಜಿಪಿ ಡಾ.ರವಿಕಾಂತೇಗೌಡ ಪಿಎಸ್ ಐ ಬಸನಗೌಡ ಬಿರಾದಾರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. 3 ದಿನಗಳ ಹಿಂದೆ ಗುತ್ತಲ ಪಟ್ಟಣಕ್ಕೆ ಭೇಟಿ ನೀಡಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮಟ್ಕಾ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ್ದರು. ಸ್ವತಃ ತಾವೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಹೀಗಾಗಿ ಮಟ್ಕಾ ದಂಧೆಕೋರರನ್ನು ಹಿಡಿಯಲು ಶಾಸಕರೇ ಬರಬೇಕಾಯಿತು ಎಂದು ಪೊಲೀಸ್​ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಕರ್ತವ್ಯಲೋಪ ಆರೋಪದಲ್ಲಿ ಪಿಎಸ್​ಐ ತಲೆದಂಡ ಮಾಡಿ ಐಜಿಪಿ ಆದೇಶಿಸಿದ್ದಾರೆ.

ವಿವಿಧ ಕಾಮಗಾರಿಗಳ ಉದ್ಘಾಟನೆಗಾಗಿ ಹಾವೇರಿ ತಾಲೂಕಿನ ಗುತ್ತಲ ಪಟ್ಟಣಕ್ಕೆ ರುದ್ರಪ್ಪ ಲಮಾಣಿ ಭೇಟಿ ನೀಡಿದ್ದರು, ಈ ವೇಳೆ ಸ್ಥಳೀಯ ಮಹಿಳೆಯರು ಡೆಪ್ಯುಟಿ ಸ್ಪೀಕರ್​​ಗೆ ಪ್ರಾಥಮಿಕ ಮಕ್ಕಳ ಶಾಲೆ ಸಮೀದ ಕೊಠಡಿಯೊಂದರಲ್ಲಿ ಮಟ್ಕಾ ದಂಧೆ ನಡೆಯುತ್ತಿರುವ ಬಗ್ಗೆ ದೂರು ನೀಡಿದ್ದರು. ಅವ್ಯಾಹತವಾಗಿ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಪೊಲೀಸ್ ಅಧಿಅಕರಿಗಳು ನಿರ್ಲಕ್ಷ್ಯವಹಿಸಿದದರೆ ಎಂದು ದೂರಿದ್ದರು. ಕೂಡಲೇ ಸ್ಥಳಕ್ಕೆ ರುದ್ರಪ್ಪ ಲಮಾಣಿ ಭೇಟಿ ನೀಡಿದಾಗ ವ್ಯಕ್ತಿಯೋರ್ವ ಮಟ್ಕಾ ಬರೆಯುತ್ತಿರುವುದು ಕಂಡುಬಂದಿತ್ತು.

ಮಟ್ಕಾ ದಂಧೆ ನಡೆಯುತ್ತಿರುವುದನ್ನು ಕಂಡು ಗರಂ ಆದ ರುದ್ರಪ್ಪ ಲಮಾಣಿ, ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಪಿಎಸ್​ಐಗೆ ಆರೋಪಿಯನ್ನು ಒಪ್ಪಿಸಿದ್ದ ಡೆಪ್ಯುಟಿ ಸ್ಪೀಕರ್​​, ಅಧಿಕಾರಿಗಳನ್ನು ತರಾಟೆಗೆ ಪಡೆದ ಪ್ರಸಂಗವೂ ನಡೆದಿತ್ತು. ಕೂಡಲೇ ಮಟ್ಕಾ ದಂಧೆಗೆ ಕಡಿವಾಣ ಹಾಕುವಂತೆ ತಹಶೀಲ್ದಾರ್​​ ಮತ್ತು ಪೊಲೀಸ್​​ ಸಿಬ್ಬಂದಿಗೆ ರುದ್ರಪ್ಪ ಲಮಾಣಿ ಸೂಚಿಸಿದ್ದರು. ಈ ಬೆಳವಣಿಗೆ ಬಳಿಕ ಪಿಎಸ್ ಐ ಅವರನ್ನು ಅಮಾನತು ಮಾಡಲಾಗಿದೆ.

Home add -Advt

Related Articles

Back to top button