Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಿಂದ ವಿಧಾನಸೌಧದತ್ತ ತೆರಳಿದ್ದು, ಕೆಂಪುಬಣ್ಣದ ಬಜೆಟ್ ಸೂಟ್ ಕೇಸ್ ನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದರು.

ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಬೆಳಗ್ಗೆ 10:15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.

Home add -Advt

ಈ ಬಾರಿ ಬಜೆಟ್ ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ನಿರೀಕ್ಷೆ ಇದೆ. ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಿಗೆ ಹೊಸ ಕಾಲೇಜುಗಳ ಘೋಷಣೆ ಸಾಧ್ಯತೆ ದಟ್ಟವಾಗಿದೆ.ಬೆಳಗಾವಿ-ಹುಬ್ಬಳ್ಳಿ ರೈಲು ಮಾರ್ಗ, ಕೈಗಾರಿಕಾ ಆಧುನೀಕರಣ, ಪ್ರವಾಸೋದ್ಯಮಕ್ಕೆ ಪಿಪಿಪಿ ಮಾದರಿಯಲ್ಲಿ ಮೂಲಸೌಕರ್ಯ?,ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ ನಿರೀಕ್ಷೆ ಇದೆ.

ಬೆಂಗಳೂರಿನ ಅಭಿವೃದ್ಧಿಗೆ ಮತ್ತಷ್ಟು ಅನುದಾನ ಮೀಸಲಿಡಬಹುದು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬಹುದು, ಮೆಟ್ರೋ ವಿಸ್ತರಣೆ, ಡಬಲ್ ಡೆಕ್ಕರ್ ಮಾರ್ಗ, ಐಟಿ ಕಾರಿಡಾರ್‌ ಸ್ಥಾಪನೆಗೆ ಹಣ ಮೀಸಲಿಡಬಹುದು, ಕೈಗೆಟುಕುವ ದರದಲ್ಲಿ ವಸತಿ, ಶುದ್ಧ ಕುಡಿಯುವ ನೀರು ಮತ್ತು ನಿರಂತರ ವಿದ್ಯುತ್ ಪೂರೈಕೆಯಂತಹ ಪ್ರಮುಖ ಬೇಡಿಕೆ ಈಡೇರಿಸುವ ನಿರೀಕ್ಷೆಯಿದೆ. ವಿದ್ಯುತ್ ತೆರಿಗೆ ಇಳಿಕೆ, ಆಸ್ತಿ ತೆರಿಗೆ ರಿಯಾಯಿತಿ ನೀಡುವ ನಿರೀಕ್ಷೆ ಇದೆ.


Related Articles

Back to top button