
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ.
ಇಂದಿನಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಬೆಳಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯೊಂದಿಗೆ ಹಾಗೂ ಸಂವಿಧಾನ ಪೀಠಿಕೆ ಓದುವ ಮೂಲಕ ಬಜೆಟ್ ಅಧಿವೇಶನಕ್ಕೆ ಚಾಲನೆ ನೀಡಲಾಯಿತು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ 17ನೇ ಐತಿಹಾಸಿಕ ರಾಜ್ಯ ಬಜೆಟ್ ಭಾಷಣ ಆರಂಭಿಸಿದ್ದಾರೆ. ಈ ಬಾರಿ ಬಜೆಟ್ ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ನಿರೀಕ್ಷೆ ಇದೆ.




