Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ಬಜೆಟ್ ವಿರುದ್ಧ ಚೊಂಬು ಹಿಡಿದು ಪ್ರತಿಭಟಿಸಿದ ಬಿಜೆಪಿ ನಾಯಕರು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಸಿಎಂ ಮಂಡಿಸಿರುವ ಸುದೀರ್ಘ ಬಜೆಟ್ ಬಗ್ಗೆ ವಿಪಕ್ಷ ಬಿಜೆಪಿ ಕಿಡಿಕಾರಿದೆ.

ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಶೂನ್ಯ ಬಜೆಟ್ ಎಂದು ಚೊಂಬು ಹಿಡಿದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಚೊಂಬು ಹಿಡಿದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Home add -Advt

ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಶೂನ್ಯ ಬಜೆಟ್. ಅಭಿವೃದ್ಧಿಗೆ ಪೂರಕವಾದ ಯಾವುದೇ ಅಂಶಗಳಿಲ್ಲ. ರೈತರು, ಯುವಜನತೆಗೆ ಸಿಎಂ ಮೋಸ ಮಾಡಿದ್ದಾರೆ. ಸಾಲಗಳನ್ನು ಮಾಡಿರುವುದೇ ಸಿದ್ದರಾಮಯ್ಯನವರ ದಾಖಲೆಯ ಸಾಧನೆಯಾಗಿದೆ ಎಂದು ಟೀಕಿಸಿದರು.

Related Articles

Back to top button