Kannada NewsKarnataka NewsLatest

*ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್: ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Home add -Advt

ನವಾಜ್ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ಎಎಚ್‌ಎಂಡಿ ನವಾಜ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್‌ಗೆ ನೋಟಿಸ್ ಜಾರಿ ಮಾಡಿದೆ.

2015 ಮತ್ತು 2020ರಲ್ಲಿ ತಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಮಾನಹಾನಿ ಸುದ್ದಿಗಳನ್ನು ಪ್ರಕಟಿಸಲಾಗಿದೆ ಎಂದು ನವಾಜ್ ಆರೋಪಿಸಿದ್ದಾರೆ. ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಕಾರಣ ಅಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರೆ ಹಿತಾಸಕ್ತಿ ಸಂಘರ್ಷದ ಪ್ರಶ್ನೆ ಉದ್ಭವಿಸಬಹುದು. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಅರ್ಜಿಯಲ್ಲಿ ವಿವರಿಸಲಾಗಿದೆ.

Related Articles

Back to top button