Belagavi NewsBelgaum NewsKannada NewsKarnataka NewsLatest

*ರಸ್ತೆ ಕಾಮಗಾರಿಗೆ 1.20 ಕೋಟಿ ರೂ.: ಪೂಜೆ ಸಲ್ಲಿಸಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಫ್ರೀಡಂ ಫೈಟರ್ಸ್ ಕಾಲೋನಿಯಲ್ಲಿ 1.20 ಕೋಟಿ ರೂ. ವೆಚ್ಚದ ರಸ್ತೆ ಮತ್ತು ಫೇವರ್ಸ್ ಅಳವಡಿಕೆಯ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಚಾಲನೆ ನೀಡಿದರು.

Home add -Advt

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದಾಗಿ ಅನುದಾನ ಬಿಡುಗಡೆಯಾಗಿದ್ದು, ಕ್ಷೇತ್ರದ ಜನರ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವುದು ನನ್ನ ಸಂಕಲ್ಪವಾಗಿದ್ದು ಈ ನಿಟ್ಟಿನಲ್ಲಿ ಸುಸಜ್ಜಿತ ರಸ್ತೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ವೇಳೆ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು, ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button