
ಪ್ರಗತಿವಾಹಿನಿ ಸುದ್ದಿ: ಜಮೀನು ವಿವಾದಕ್ಕೆ ಸಂಅಬ್ಂಧಿಸಿದಂತೆ ಪೊಲೀಸರ ವಿಚಾರಣೆಗೆ ಹೆದರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿಇದೆ.
ಇಲ್ಲಿನ ಉಮಚಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ಹೊಲದ ದಾರಿ ವಿಚಾರವಾಗಿ ಉಮಚಗಿ ಗ್ರಾಮದಲ್ಲಿ ಗಲಾಟೆಯಾಗಿದ್ದು, ಈ ಸಂಬಂಧ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಲ್ಲೇ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪೊಲೀಸರು ಕರೆ ಮಾಡಿ ಸ್ಪೆಷನ್ಗೆ ಬರುವಂತೆ ಹೇಳಿದ್ದಾರೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಮೀನು ಹಾದಿ ಸಂಬಂಧ ಉಮಚಗಿ ಗ್ರಾಮದಲ್ಲಿ ಜಗಳವಾಗಿದ್ದು, ಈ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯರು, ನಿಂಗಪ್ಪನನ್ನು ಕರೆಸಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಪಂಚಾಯಿತಿ ಸದಸ್ಯರು, ನಿಂಗಪ್ಪ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ಸಹ ಎರಡ್ಮೂರು ದಿನಗಳಿಂದ ನಿಂಗಪ್ಪನಿಗೆ ಕರೆ ಮಾಡಿ ಠಾಣೆಗೆ ವಿಚಾರಣೆ ಬರುವಂತೆ ಸೂಚಿಸಿದ್ದಾರೆ. ಇಂದು ಸಹ ಪೊಲಿಸರು, ನಿಮ್ಮ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಸ್ಟೆಷನ್ಗೆ ಬನ್ನಿ ಎಂದು ನಿಂಗಪ್ಪನಿಗೆ ಕರೆ ಮಾಡಿ ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿ ಪಂಚಾಯಿತಿ ಸದಸ್ಯರ ಹಲ್ಲೆಯಿಂದ ಮನನೊಂದಿದ್ದ ನಿಂಗಪ್ಪನಿಗೆ ಪೊಲೀಸರು ಸಹ ಮೇಲಿಂದ ಮೇಲೆ ಕರೆ ಮಾಡಿ ಠಾಣೆಗೆ ಬರುವಂತೆ ಒತ್ತಾಯಿಸಿದ್ದರಿಂದ ಭಯಗೊಂಡು ಸಾವಿಗೆ ಶರಣಾಗಿದ್ದಾರೆ.



