
ಪ್ರಗತಿವಾಹಿನಿ ಸುದ್ದಿ: ಮಲಗಿದ್ದಲ್ಲಿಯೇ ಆರೋಗ್ಯ ಇಲಾಖೆ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಗವೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 ವರ್ಷದ ದೇವಾನಂದ್ ಮೃತ ದುರ್ದೈವಿ. 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು.
ದೇವಾನಂದ್ ಅವರಿಗೆ ಇಂದು ಬೆಳಗಿನ ಜಾವ ಮಲಗಿದ್ದಲಿಯೇ ಹೃದಯಾಘಾತವಾಗಿದೆ. ತಕ್ಷಣ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.


