CrimeKannada NewsKarnataka NewsLatest

*ಲಾಡ್ಜ್ ರೂಂ ನಲ್ಲಿ ಆತ್ಮಹತ್ಯೆಗೆ ಶರಣಾದ ಶಾಸಕ ಬಸವರಾಜ್ ಶಿವಗಂಗಾ ಪಿಎ*

ಪ್ರಗತಿವಾಹಿನಿ ಸುದ್ದಿ: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರು ನಗರದ ಉಪ್ಪಾರಪೇಟೆ ಲಾಡ್ಜ್ ನಲ್ಲಿ ಶಾಸಕ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಮೂಲದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡವರು.

ಶಿವಕುಮಾರ್ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಶಿವಕುಮಾರ್ ತೀವ್ರ ಸಾಲ ಮಾಡಿಕೊಂಡಿದರು. ಅವರನ್ನು ಕೆಲ ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದರಂತೆ. ಫೆ.೧೭ರಂದು ಅವರು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button