Kannada NewsKarnataka NewsLatestLife Style

*ಯುದ್ಧ ಪರಿಣಾಮ ಸಿಲಿಂಡರ್ ಪೂರೈಕೆ ಸ್ಥಗಿತ: ಹೋಟೆಲ್ ಬಂದ್ ಆಗುವ ಆತಂಕ*

ಪ್ರಗತಿವಾಹಿನಿ ಸುದ್ದಿ: ಯುದ್ಧದ ಪರಿಣಾಮ  ರಾಜಧಾನಿ ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮಕ್ಕೆ ಬಿಸಿ ತಟ್ಟಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಹೋಟೆಲ್ ಬಂದ್ ಆಗುವ ಆತಂಕ ಎದುರಾಗಿದೆ.

ಬೆಂಗಳೂರಿಗೆ ಗ್ಯಾಸ್ ಸರಬರಾಜು ನಿಂತಿದ್ದು ಅನಿವಾರ್ಯವಾಗಿ ಬಂದ್ ಮಾಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಹೋಟೆಲ್ ಮಾಲೀಕರ ಸಂಘ ಎಚ್ಚರಿಸಿದೆ.

ಮುಂದಿನ ಎರಡು ಮೂರು ದಿನದಲ್ಲಿ ಪರಿಸ್ಥಿತಿ ಅವಲೋಕಿಸಿ ಬಂದ್ ತೀರ್ಮಾನ ಕೈಗೊಳ್ಳುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತೆ. ಸದ್ಯಕ್ಕೆ ಸಿಲಿಂಡರ್ ಪೂರೈಕೆಯಾಗುತ್ತಿಲ್ಲ. ಬುಧವಾರ ಮಧ್ಯಾಹ್ನಕ್ಕೆ ಆಗುವಷ್ಟು ಸಿಲಿಂಡರ್ ಮಾತ್ರ ಸ್ಟಾಕ್ ನಲ್ಲಿದೆ . ಅಷ್ಟರೊಳಗೆ ಸರ್ಕಾರ ಪೂರೈಕೆ ಮಾಡದಿದ್ರೆ ಎಲ್ಲಾ ಹೋಟೆಲ್ ಗಳು ಬಂದ್ ಮಾಡಲಾಗುತ್ತೆ ಎಂದು ಹೋಟೆಲ್ ಮಾಲೀಕರ ಸಂಘ ಎಚ್ಚರಿಸಿದೆ.

ಹೊಟೆಲ್ ಮಾಲೀಕರ ಸಂಘ ಯಾವುದೇ ಬಂದ್‌ಗೆ ಕರೆ ಕೊಟ್ಟಿಲ್ಲ. ಆದರೆ ಆಹಾರ, ತಿನಿಸುಗಳು ಇಲ್ಲದಿದ್ದರೆ ಬಂದ್‌ ಮಾಡಲೇಬೇಕಾದ ಸ್ಥಿತಿ ತಲೆದೂರಲಿದೆ. ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು. ಸಮಸ್ಯೆ ಬಗ್ಗೆ ಹರಿಸಬೇಕು ಎಂದು ಮಾಲೀಕರು ಆಗ್ರಹಿಸಿದ್ದಾರೆ.

Home add -Advt

Related Articles

Back to top button