Belagavi NewsBelgaum NewsCrimeKannada NewsKarnataka NewsLatestNationalPolitics

*ಹಿಂಡಲಗಾ ಜೈಲು ವಾರ್ಡರ್ ನದಿಗೆ ಹಾರಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಕಾರಾಗೃಹದ ವಾರ್ಡರ್ ಇಲ್ಲಿನ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ನಿವಾಸಿ ವಿನೋದ ಭೀಮಪ್ಪ ತಿಗಡಿ (31) ಮೃತ ವ್ಯಕ್ತಿ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಾರ್ಡರ್ ಆಗಿ ಸೇವೆ ಸಲ್ಲಿಸುತ್ತಿದ್ದ ಇವರು ಇತ್ತೀಚೆಗೆ ಹೊಸ ಮನೆ ಕಟ್ಟಿಸಿದ್ದರು. ಮದುವೆ ಆಗಲು ವಧು ಹುಡುಕುತ್ತಿದ್ದರು. ಆದರೆ, ವಧು ಸಿಗದಿದ್ದರಿಂದ ಜಿಗುಪ್ಪೆಗೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂ ಡಿದ್ದಾರೆ ಎಂದು ಚನ್ನಮ್ಮ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Home add -Advt

Related Articles

Back to top button