CrimeKannada NewsKarnataka NewsLatest
*BREAKING: ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ 5 ತಿಂಗಳ ಗರ್ಭಿಣಿ*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹಕ್ಕೆ ಬೇಸತ್ತು ಗರ್ಭಿಣಿಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ನಯನಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 9 ತಿಂಗಳ ಹಿಂದೆ ಸುನೀಲ್ ಎಂಬುವವರನ್ನು ನಯನಾ ವಿವಾಹವಾಗಿದ್ದರು. ನಯನಾ ೫ ತಿಂಗಳ ಗರ್ಭಿಣಿಯಾಗಿದ್ದರು.
ಪತಿ ಸುನೀಲ್, ಅತ್ತೆ-ಮಾವನ ಕಿರುಕುಳಕ್ಕೆ ನೊಂದು ನಯನಾ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾಳೆ ಎಂದು ನಯನಾ ಪೋಷಕರು ದೂರಿದ್ದಾರೆ.
ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




